ಬೆಂಗಳೂರು, ಸೆ. 24 (DaijiworldNews/SM): ರಾಜ್ಯದ ಗಡಿ ಭಾಗದಲ್ಲಿ ಸಾರಿಗೆ ಇಲಾಖೆಯಿಂದ ಅಳವಡಿಸಿರುವ ಚೆಕ್ ಪೋಸ್ಟ್ ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಗಡಿ ಭಾಗದಲ್ಲಿ ಸಾರಿಗೆ ಇಲಾಖೆಯಿಂದ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದೆಲ್ಲೆಡೆ 15 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ 37 ಖಾಯಂ ಹುದ್ದೆ ಮಂಜೂರಾಗಿದ್ದು ಈ ಪೈಕಿ 8 ಹುದ್ದೆ ಮಾತ್ರ ಭರ್ತಿಯಾಗಿದೆ. ಉಳಿದ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.
15 ಚೆಕ್ ಪೋಸ್ಟ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಆದಷ್ಟು ಬೇಗ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.