ಬೆಂಗಳೂರು, ಸೆ.25 (DaijiworldNews/PY): "ಕೃಷಿ ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ ನೇಮಕಾತಿ ಪ್ರಕ್ರಿಯೆ ಮಾಡಲಾಗುವುದು" ಎಂದು ಸಚಿವ ಬಿ. ಸಿ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಪರಿಷತ್ನಲ್ಲಿ ಮಾತನಾಡಿದ ಅವರು, "ಕೃಷಿ ವಿವಿಗಳಲ್ಲಿ ಖಾರಿ ಇರುವ ಶೇ.50ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹಮತ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು" ಎಂದಿದ್ದಾರೆ.
"ಜಿಲ್ಲೆಗೆ ಒಂದು ಕೃಷಿ ಕಾಲೇಜು ಇರಬೇಕು ಎನ್ನುವ ನಿಯಮವಿದೆ. ಆರ್ಥಿಕ ಪರಿಸ್ಥಿತಿ ಆಧರಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.
"ಕೃಷಿ ತೋಟಗಾರಿಗೆ ವಿಶ್ವವಿದ್ಯಾಲಯಗಳನ್ನು ವಿಲೀನಗೊಳಿಸುವುದು ಅಥವಾ ಒಂದೇ ಕಡೆಯಲ್ಲಿ ಸ್ಥಾಪನೆ ಮಾಡುವ ಕುರಿತು ಸಮಾಲೋಚನೆ ನಡೆಸಲಾಗುವುದು. ಎಲ್ಲವೂ ಒಂದೇ ಕಡೆಯಲ್ಲಿ ಇದ್ದರೆ ರೈತರಿಗೆ ಅನುಕೂಲವಾಗಲಿದೆ" ಎಂದಿದ್ದಾರೆ.