ನವದೆಹಲಿ, ಸೆ 25 (DaijiworldNews/MS): ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗೋವಾದಲ್ಲಿ ತಮ್ಮ ಪಕ್ಷದ ನಾಯಕರಿಗೆ ರಾಜ್ಯದಲ್ಲಿ ಬಿರುಸಿನ ಪ್ರಚಾರವನ್ನು ಆರಂಭಿಸಲು ಹಾಗೂ ಆಡಳಿತಾರೂಢ ಬಿಜೆಪಿಯ ಸೋಲಿನ ರುಚಿ ಉಣಿಸುವಂತೆ ಸೂಚಿಸಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ಅಧ್ಯಕ್ಷತೆ ವಹಿಸಿದ್ದ ಪಕ್ಷದ ನಾಯಕರ ಸಭೆಯಲ್ಲಿ ಗಾಂಧಿ ಈ ನಿರ್ದೇಶನ ನೀಡಿದರು ಎಂದು ಕಾಂಗ್ರೆಸ್ ನ ಗೋವಾ ಡೆಸ್ಕ್ ಉಸ್ತುವಾರಿ ದದಿನೇಶ್ ಗುಂಡೂರಾವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗುಂಡೂರಾವ್ ಅವರನ್ನು ಹೊರತುಪಡಿಸಿ, ಗೋವಾ ವಿಧಾನಸಭಾ ಚುನಾವಣೆಗೆ ಪಕ್ಷದ ಹಿರಿಯ ಚುನಾವಣಾ ವೀಕ್ಷಕ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕ ದಿಗಂಬರ್ ಕಾಮತ್ ಸಭೆಯಲ್ಲಿ ಭಾಗವಹಿಸಿದ್ದರು.
2017 ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 40 ಸದಸ್ಯರ ಸದನದಲ್ಲಿ 17 ಸ್ಥಾನಗಳನ್ನು ಗೆದ್ದಿತ್ತು, ಬಿಜೆಪಿಯನ್ನು 13 ಕ್ಕೆ ಸೀಮಿತಗೊಳಿಸಿತು. ಆದಾಗ್ಯೂ, ಕಾಂಗ್ರೆಸ್ ಅನ್ನು ಆಶ್ಚರ್ಯಗೊಳಿಸಿದಂತೆ, ಕೇಸರಿ ಪಕ್ಷವು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತ್ತು.