ಚಿಕ್ಕೋಡಿ, ಸೆ.25 (DaijiworldNews/PY): "ಸಾರಿಗೆ ಮುಷ್ಕರದಲ್ಲಿ ಭಾಗವಹಿಸಿ ನೌಕರಿಯಿಂದ ವಜಾಗೊಂಡಿದ್ದ ಸಿಬ್ಬಂದಿಗಳನ್ನು ಮತ್ತೆ ನೌಕರಿಗೆ ತೆಗೆದುಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ" ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, "ನೌಕರರು ಮತ್ತೆ ಈ ರೀತಿಯಾದ ತಪ್ಪನ್ನು ಮಾಡದೇ, ಸರ್ಕಾರದ ನಿಯಮಗಳನ್ನು ಪಾಲಿಸಬೇಕು" ಎಂದು ಹೇಳಿದ್ದಾರೆ.
"ಹಂತ ಹಂತವಾಗಿ ಸಾರಿಗೆ ಸಿಬ್ಬಂದಿಗಳ ಬೇಡಿಕೆಯನ್ನು ಈಡೇರಿಸಲಾಗುತ್ತದೆ. ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಸಾರಿಗೆ ಸಿಬ್ಬಂದಿಗಳ ಬೇಡಿಕೆಗೆ ಸಿಎಂ ಅವರು ಸ್ಪಂದಿಸಿದ್ದಾರೆ" ಎಂದು ತಿಳಿಸಿದ್ದಾರೆ.
"ಸಾರಿಗೆ ಸಿಬ್ಬಂದಿ ಯಾವುದೇ ಬೇಡಿಕೆ ಇದ್ದರೂ ಅವುಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಬದಲಾಗಿ ಏಕಾಏಕಿ ಮುಷ್ಕರ ನಡೆಸುವುದು ಸರಿಯಲ್ಲ" ಎಂದಿದ್ದಾರೆ.