ಬೆಳಗಾವಿ, ಸೆ.26 (DaijiworldNews/HR): ಕೊರೊನಾ ಪ್ರಕರಣಗಳು ಇಳಿಮುಖವಾದ ಬಳಿಕ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಆರಂಭವಾಗಿದ್ದು, ಜನ, ರೈತರು ಸಮಸ್ಯೆ ಅನುಭವಿಸಿದ್ದು, ಎಲ್ಲಾ ಚಟುವಟಿಕೆಗಳಿಗೆ ಧರಣಿನಿರತರು ಸಹಕಾರ ಕೊಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "2019 -20 ರಲ್ಲಿ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಆಗ ನಮ್ಮ ನಾಯಕರು ಪರಿಹಾರ ಕೊಡುವುದಾಗಿ ಹೇಳಿದ್ದರು. ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲಾಗುತ್ತಿದೆ. ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು" ಎಂದರು.
ಇನ್ನು ಬೆಳಗಾವಿ ಸರ್ಕ್ಯೂಟ್ ಹೌಸ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರೈತಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದು, ಸಕ್ಕರೆ ಕಾರ್ಖಾನೆಗಳಿಂದ ಬರಬೇಕಿರುವ ಕಬ್ಬಿನ ಬಾಕಿ ಮೊತ್ತ, ನೆರೆ ಸಂತ್ರಸ್ತರ ಪರಿಹಾರವನ್ನು ತುರ್ತಾಗಿ ಕೊಡುವಂತೆ ಮನವಿ ಮಾಡಲಾಗಿದೆ.