ಕೋಲ್ಕತ್ತ, ಸೆ.26 (DaijiworldNews/PY): "ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ಸಲಹೆಗಾರ ಪ್ರಶಾಂತ್ ಕಿಶೋರ್ ಅವರ ಹೆಸರು ಭವಾನಿಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ" ಎಂದು ಬಿಜೆಪಿ ತಿಳಿಸಿದೆ.
"ಪ್ರಶಾಂತ್ ಕಿಶೋರ್ ಅವರನ್ನು ಭವಾನಿಪುರ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಿದ ಹೊರಗಿನವರು" ಎಂದು ಬಿಜೆಪಿ ಲೇವಡಿ ಮಾಡಿದೆ.
ಸೆ.30ರಂದು ಭವಾನಿಪುರದಲ್ಲಿ ಉಪಚುನಾವಣೆ ನಡೆಯಲಿದೆ. ಟಿಎಂಸಿಯಿಂದ ಸಿಎಂ ಮಮತಾ ಬ್ಯಾನರ್ಜಿ ಅವರು ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಪ್ರಿಯಾಂಕ ಟಿಬ್ರೆವಾಲ್ ಸ್ಪರ್ಧಿಸುತ್ತಿದ್ದಾರೆ.
"ಭವಾನಿಪುರ ಉಪಚುನಾವಣೆಗೆ ಹೊರಗಿನಿಂದ ಬಂದ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ" ಎಂದು ಫಿರ್ಹಾದ್ ಹಕೀಮ್ ಸೇರಿದಂತೆ ಹಲವು ಟಿಎಂಸಿ ನಾಯಕರು ತಿಳಿಸಿದ್ದರು.
ಭವಾನಿಪುರ ಚುನಾವಣೆ ಘೋಷಣೆಯಾದ ನಂತರ ಪ್ರಶಾಂತ್ ಕಿಶೋರ್ ಅವರು ಸಾರ್ವಜನಿಕವಾಗಿ ಪಕ್ಷದ ಪ್ರಚಾರಭಿಮಾನಗಳಲ್ಲಿ ಕಾಣಿಸಿಕೊಂಡಿಲ್ಲ. ಆದರೆ, ಇತ್ತೀಚೆಗೆ ದೆಹಲಿಯಲ್ಲಿ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಜೊತೆ ಕಾಣಿಸಿಕೊಂಡಿದ್ದರು.