ಮೈಸೂರು, ಸೆ.26 (DaijiworldNews/HR): ಎಚ್.ಡಿ.ಕೋಟೆ ತಾಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ಸಹೋದರರಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಅಣ್ಣ ಸಿದ್ದರಾಜು ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಅಣ್ಣನ ಸಾವಿನ ಸುದ್ದಿ ತಿಳಿದು ಕ್ರಿಮಿನಾಶಕ ಸೇವಿಸಿ ತಮ್ಮ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನು ಇವರ ಮನೆಯಲ್ಲಿ ಬಡತನವಿದ್ದು ಇತ್ತ ಉದ್ಯೋಗವೂ ಇರಲಿಲ್ಲ. ಇದರಿಂದ ಮನನೊಂದಿದ್ದ ಅಣ್ಣ ಸಿದ್ದರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಣ್ಣನ ಮೇಲೆ ಅಪಾರವಾದ ಪ್ರೀತಿ ಹೊಂದಿದ್ದ ತಮ್ಮನು ಕೂಡ ಅಣ್ಣನ ಸಾವಿನ ಸುದ್ದಿ ಕೇಳಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ಎಚ್.ಡಿ. ಕೋಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.