ಬೆಳಗಾವಿ, ಸೆ.26 (DaijiworldNews/PY): "ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದ್ದು, ಬಿಜೆಪಿಯನ್ನು 150 ಸ್ಥಾನಗಳಲ್ಲಿ ಗೆಲ್ಲಿಸಿ" ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದ್ದಾರೆ.
ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಿರ್ಮಿಸಲಾದ ಪುರಸಭೆ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, "ಸಿಎಂ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ದಿಯ ಕಲ್ಪನೆಯನ್ನು ಸಣ್ಣ ಪಟ್ಟಣ ಹಾಗೂ ಗ್ರಾಮಗಳ ಕಡೆಗೆ ತೆಗೆದುಕೊಂಡು ಹೋಗುವ ಮುಖೇನ ರಾಜ್ಯದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ" ಎಂದಿದ್ದಾರೆ.
"ನಾಗರಿಕರು ಸರ್ಕಾರಿ ಬಸ್ಗಳಲ್ಲಿ ಸುರಕ್ಷಿತ ಹಾಗೂ ನೆಮ್ಮದಿಯಿಂದ ಪ್ರಯಾಣ ಕೈಗೊಳ್ಳಲು ಎಲ್ಲಾ ಅಗತ್ಯವಾದ ವ್ಯವಸ್ಥೆ ಕಲ್ಪಿಸಲು ಬದ್ದವಾಗಿದ್ದೇವೆ" ಎಂದು ತಿಳಿಸಿದ್ದಾರೆ.
"ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಂದ ಅಭಿವೃದ್ದಿ ಕಾರ್ಯಗಳು ಡಬಲ್ ಎಂಜಿನ್ ಗಾಡಿಯಂತೆ ನಾಗಲೋಟದಲ್ಲಿ ಸಾಗಿವೆ" ಎಂದು ಹೇಳಿದ್ದಾರೆ.