ಶ್ರೀನಗರ, ಸೆ.26 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಬಂಡಿಪೊರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾನುವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ.
ಸಾಂದರ್ಭಿಕ ಚಿತ್ರ
ದಕ್ಷಿಣ ಕಾಶ್ಮೀರದ ವಾಟ್ನಿರಾ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದು ಶೋಧ ಕಾರ್ಯ ಕೈಗೊಂಡಿದ್ದಾರೆ. ಉಗ್ರರು ಮೊದಲಿಗೆ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಸೂಕ್ತ ಪ್ರತಿರೋಧ ತೋರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಗುಂಡಿನ ಚಕಮಕಿಯು ಮುಂದುವರೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.