ರಾಮನಗರ, ಸೆ.26 (DaijiworldNews/PY): "ಜೆಡಿಎಸ್ ಪಕ್ಷದ ವತಿಯಿಂದ ಸೆ.27ರಿಂದ 4 ದಿನಗಳ ಕಾಲ ಕಾರ್ಯಾಗಾರ ನಡೆಸಲಾಗುವುದು" ಎಂದು ಮಾಜಿ ಸಿಎ ಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿ ಮಾತನಾಡಿದ ಅವರು, "ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಮೊದಲ ಎರಡು ದಿನ ಶಾಸಕ ಸ್ಥಾನದ ಆಕಾಂಕ್ಷಿಗಳು, ಜೆಡಿಎಸ್ ಶಾಸಕರಿಗೆ ಕಾರ್ಯಾಗಾರ ನಡೆಯಲಿದೆ. ಮೂರನೇ ದಿನ ಮಹಿಳೆಯರಿಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು, ಬೂತ್ ಮಟ್ಟದಲ್ಲಿ ಮಹಿಳಾ ಸಂಘಟನೆಯ ಬಗ್ಗೆ ಜವಾಬ್ದಾರಿ ಬಗ್ಗೆ ಕಾರ್ಯಾಗಾರ ನಡೆಸಲಾಗುವುದು" ಎಂದು ಹೇಳಿದ್ದಾರೆ.
"ಪಕ್ಷದ ವರಿಷ್ಠ ಹೆಚ್ ಡಿ ದೇವೇಗೌಡರು ಪಕ್ಷ ಸಂಘಟನೆ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಏಳು ಸೆಷನ್ನಲ್ಲಿ ಕಾರ್ಯಾಗಾರ ನಡೆಯಲಿದ್ದು, ಯಾವುದೇ ಪಕ್ಷದ ಜೊತೆ ಜೆಡಿಎಸ್ ಪಕ್ಷ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಅಧಿಕಾರ ಪಡೆಯುವುದು ನಮ್ಮ ಪಕ್ಷದ ಗುರಿಯಾಗಿದೆ" ಎಂದಿದ್ದಾರೆ.