ನವದೆಹಲಿ, ಸೆ.26 (DaijiworldNews/HR): ಅಸ್ಸಾಂನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕೋರ್ಟ್ಗಳು ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಅಸ್ಸಾಂ ಹಿಂಸಾಕೃತ್ಯದ ಚಿತ್ರಗಳನ್ನು ಸಾಮಾಜಿಕ ತಾಣಗಳಲ್ಲಿ ನೋಡಿ ನನಗೆ ಭಯ ಉಂಟಾಗಿದೆ. ಪ್ರತಿರೋಧ ತೋರಿದವರ ಮೇಲೆ ನಡೆದಿರುವ ಅಮಾನುಷ ದೌರ್ಜನ್ಯವು ಖಂಡನೀಯ. ಈ ಬಗ್ಗೆ ಸರ್ಕಾರ ಮೌನವಾಗಿರುವುದನ್ನು ನೋಡಿ ಹತಾಶೆಯಾಗಿದೆ" ಎಂದರು.
ಇನ್ನು ದರಂಗ್ ಜಿಲ್ಲೆಯಲ್ಲಿ ಅಸ್ಸಾಂ ಸರ್ಕಾರ ಒತ್ತುವರಿ ಜಮೀನು ತೆರವು ಕಾರ್ಯಾಚರಣೆ ಕೈಗೊಂಡಿದ್ದು, ಭೂಮಿ ಕಬಳಿಸಿದ್ದಾರೆ ಎನ್ನಲಾದ ಸ್ಥಳೀಯರು ಮತ್ತು ಪೊಲೀಸರ ನಡುವೆ ಸಂಘರ್ಷವು ಹಿಂಸಾತ್ಮಕ ತಿರುವು ಕಂಡಿದ್ದು, ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಸ್ಥಳೀಯರು ಮೃತಪಟ್ಟಿದ್ದರು. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.