ಬೆಂಗಳೂರು, ಸೆ.26 (DaijiworldNews/PY): "ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಶಾಶ್ವತವಾಗಿ ನಿರುದ್ಯೋಗಿಯಾಗಲಿದ್ದಾರೆ. ಈ ಇಬ್ಬರು ನಾಯಕರು ಅಧಿಕಾರವಿಲ್ಲದೆ ಕೊನೆಯವರೆಗೂ ಟಾಂಗಾ ಗಾಡಿಯಲ್ಲಿ ನಡೆದಾಡಬೇಕಿದೆ" ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ರಾಜ್ಯದಲ್ಲಿ ಮುಂದೆ ನಡೆಯಲಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಮುಂದಡಿಯಿಡುತ್ತೇವೆ" ಎಂದು ಹೇಳಿದೆ.
"ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ದೊಡ್ಡಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪರವಾದ ಫಲಿತಾಂಶ ಬಂದಿದೆ. ಇದರಿಂದ ಮುಂದೆ ಡಿಕೆಶಿ & ಸಿದ್ದರಾಮಯ್ಯ ಶಾಶ್ವತವಾಗಿ ನಿರುದ್ಯೋಗಿಯಾಗಲಿದ್ದಾರೆ. ಈ ಇಬ್ಬರು ನಾಯಕರು ಅಧಿಕಾರವಿಲ್ಲದೆ ಕೊನೆಯವರೆಗೂ ಟಾಂಗಾ ಗಾಡಿಯಲ್ಲಿ ನಡೆದಾಡಬೇಕಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದೆ.