ನವದೆಹಲಿ, ಸೆ.26 (DaijiworldNews/HR): ಯುಪಿಎ ಅಧಿಕಾರಕ್ಕೆ ಬಂದರೆ ಸೋನಿಯಾ ಗಾಂಧಿ ಭಾರತದ ಪ್ರಧಾನಿಯಾಗಬೇಕು ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ರಾಮದಾಸ್ ಅಠಾವಳೆ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕಾದ ಉಪಾಧ್ಯಕ್ಷೆಯಾಗುವುದಾದರೆ, ಸೋನಿಯಾ ಗಾಂಧಿ ಭಾರತೀಯ ಪ್ರಜೆಯಾಗಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪತ್ನಿ ಮತ್ತು ಈ ದೇಶದ ಸಂಸದೆ ಆಗಿರುವ ಅವರು ಪ್ರಧಾನಿ ಆಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.
ಇನ್ನು ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದು, ಕಮಲಾ ಹ್ಯಾರಿಸ್ ಅವರ ಎರಡನೇ ಹಿಂದಿನ ತಲೆಮಾರು ತಮಿಳುನಾಡಿನಲ್ಲಿ ನೆಲೆಸಿತ್ತು.