ರಾಮನಗರ, ಸೆ.26 (DaijiworldNews/HR): ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಜಾತಿ ಗಣತಿ ವರದಿ ಬಿಡುಗಡೆ ವಿಚಾರವಾಗಿ ಸಮರ ಮುಂದುವರೆದಿದ್ದು, ಸಿದ್ದರಾಮಯ್ಯನವರ ಸುಳ್ಳಿಗೂ ಇತಿಮಿತಿ ಇರಬೇಕು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಜಾತಿ ಗಣತಿ ವರದಿ ಬಿಡುಗಡೆಗೆ ಕುಮಾರಸ್ವಾಮಿ ಬೆದರಿಕೆ ಇದ್ದು, ಸಚಿವ ಪುಟ್ಟರಂಗಶೆಟ್ಟಿ ಸಮೀಕ್ಷೆ ಬಿಡುಗಡೆ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿ, "ಜಾತಿ ಗಣತಿ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ ಚರ್ಚೆ ನಡೆಸಬೇಕಿತ್ತು. ಜನರಿಗೆ ಸತ್ಯಾಂಶವನ್ನು ತಿಳಿಸಬಹುದಿತ್ತು. ಅದನ್ನು ಬಿಟ್ಟು ಸಿದ್ದರಾಮಯ್ಯ ಸದನದ ಹೊರಗೆ ಬೀದಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವ ಅಪರಾದ" ಎಂದರು.
ಇನ್ನು "ಹತ್ತು ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಇವರು ಸದನದಲ್ಲಿ ನಡೆದುಕೊಂಡಿದ್ದು ಹೇಗೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನಾನು ಜಾತಿ ಗಣತಿ ಬಿಡುಗಡೆಗೆ ತಡೆದೆ ಎನ್ನುವುದಾದರೆ ಅದನ್ನು ಸದನದಲ್ಲಿ ಪ್ರಸ್ತಾಪ ಮಾಡಬೇಕಾಗಿತ್ತು. ಸುಳ್ಳು ಹೇಳುವುದಕ್ಕೂ ಕೂಡ ಇತಿಮಿತಿ ಇರಬೇಕು" ಎಂದು ಹೇಳಿದ್ದಾರೆ.