ಬೆಂಗಳೂರು, ಸೆ. 26 (DaijiworldNews/SM): ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅನ್ನಭಾಗ್ಯದ ಅಕ್ಕಿಯಲ್ಲೂ ಕೂಡ ರಾಜಕೀಯ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಿದ್ಧರಾಮಯ್ಯ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. "ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಚಿತವಾಗಿ ಏಳು ಕೆಜಿ ಅಕ್ಕಿಯನ್ನು ಕೊಟ್ಟಿದ್ದೆ. ಆದರೆ, ಕುಮಾರಸ್ವಾಮಿ ಅಕ್ಕಿ ಕೊಟ್ಟಿದ್ದಾರಾ? ಅಥವಾ ಪ್ರಸ್ತುತ ಸಿಎಂ ಆಗಿರುವ ಬೊಮ್ಮಾಯಿಯವರು ನೀಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಬಡವರಿಗೆ ಅಕ್ಕಿ ಕೊಡೋಕೆ ಯಾಕೆ ಹೊಟ್ಟೆ ಉರಿ ಎಂದು ಪ್ರಶ್ನಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ತಿರುಗೇಟು ಕೊಟ್ಟಿದ್ದಾರೆ. ಸಿದ್ಧರಾಮಯ್ಯ ಅವರ ವಿರುದ್ಧ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.