ಕೋಲ್ಕತ್ತ, ಸೆ.27 (DaijiworldNews/HR): ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ತಡೆಯುವಲ್ಲಿ ಸೋತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರೋಮ್ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸುವ ಹಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅಧಿಕಾರಿ, "ಖೇಜುರಿ, ನಂದಿಗ್ರಾಮ, ಪುರ್ಬಾ ಮೇದಿನಿಪುರ ಜಿಲ್ಲೆ ಹಾಗೂ ಇತರ ಸ್ಥಳಗಳಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಭಾಗಿಯಾದವರ ಬಂಧನಕ್ಕೆ ಮಮತಾ ಕ್ರಮ ಕೈಗೊಳ್ಳುತ್ತಿಲ್ಲ" ಎಂದೂ ಆರೋಪಿಸಿದ್ದಾರೆ.
ಇನ್ನು ರೋಮ್ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸಲು ನೀವು ಅರ್ಹರಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಮಾಡಿದವರಿಗೆ ಮತ್ತು ಟಿಎಂಸಿ ಕಾರ್ಯಕರ್ತರ ಹಿಂಸಾತ್ಮಕ ಕೃತ್ಯಗಳಿಗೆ ನೀವು ಕುಮ್ಮಕ್ಕು ನೀಡಿದ್ದೀರಿ" ಎಂದಿದ್ದಾರೆ.
ರೋಮ್ನಲ್ಲಿ ನಡೆಯಲಿರುವ ವಿಶ್ವ ಶಾಂತಿಯ ಕುರಿತ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರ ನನಗೆ ಅನುಮತಿ ನಿರಾಕರಿಸಿದೆ ಎಂದು ಮಮತಾ ಬ್ಯಾನರ್ಜಿ ಇತ್ತೀಚೆಗೆ ಆರೋಪಿಸಿದ್ದರು.