ಹುಬ್ಬಳ್ಳಿ, ಸೆ.27 (DaijiworldNews/HR): ಕಾಂಗ್ರೆಸ್ ಗುಲಾಮಗಿರಿ ಪಕ್ಷ. ನಮ್ಮದು ದೇಶಭಕ್ತಿ ಪಕ್ಷ. ಇಲ್ಲಿಯವರೆಗೆ ಮೆಕಾಲೆ ಶಿಕ್ಷಣ ಪದ್ದತಿಯನ್ನು ಅನುಸರಿಸಿಕೊಂಡು ಬಂದಿದ್ದಾರೆ. ಇದೇ ಗುಲಾಮಗಿರಿಯನ್ನು ಕಾಂಗ್ರೆಸ್ ನಾಯಕರು ಬಯಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊರೊನಾದಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಷ್ಟೆ ಒಂದಿಷ್ಟು ವ್ಯಾಪಾರ ವಹಿವಾಟು ಆರಂಭಿಸಿದ್ದಾರೆ. ಹೀಗಾಗಿ ಜನರಿಗೆ ತೊಂದರೆಯಾಗುವಂತಹ ಕಲಸ ಮಾಡಬಾರದು. ಭಾರತ ಬಂದ್ ಬದಲಾಗಿ ವೈಚಾರಿಕ ಭಿನ್ನಾಭಿಪ್ರಾಯಗಳನ್ನು ಬೇರೆ ರೀತಿಯಲ್ಲಿ ಜನರಿಗೆ ಮಾಡಬೇಡಿ ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
ಇನ್ನು ಪ್ರಧಾನಿ ಮೋದಿ ಹೊಸ ಶಿಕ್ಷಣ ನೀತಿ ಮೂಲಕ ಜಗತ್ತಿನಲ್ಲಿ ದೇಶ ನಿಲ್ಲುವಂತಹ ಕಾರ್ಯಕ್ಕೆ ಮುಂದಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೋಡಿದರೆ ಬಹಳ ಹತಾಶರಾಗಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ" ಎಂದರು.