ಬೆಂಗಳೂರು, ಸೆ.27 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆ, ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭಾರತ್ ಬಂದ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ಪ್ರತಿಭಟನೆಯ ಸಂದರ್ಭದಲ್ಲಿ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಕಾರೊಂದು ಹರಿದಿದ್ದು, ಡಿಸಿಪಿ ಮೀನಾ ಅವರ ಕಾಲಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ.
ಭಾರತ್ ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ಗೋರಗುಂಟೆ ಪಾಳ್ಯದ ಬಳಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿಗೆ ಆಗಮಿಸೋ ಪ್ರತಿಭಟನಾ ಕಾರರನ್ನು ತಡೆಯೋ ಸಲುವಾಗಿ ಬಂದೋಬಸ್ತ್ ನಲ್ಲಿ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಕೂಡ ತೊಡಗಿದ್ದರು. ಈ ಸಂದರ್ಭದಲ್ಲಿ ಕಾರೊಂದು ಅವರ ಕಾಲಿನ ಮೇಲೆ ಹರಿದಿರೋದಾಗಿ ತಿಳಿದು ಬಂದಿದೆ.
ಇನ್ನು ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಕಾರು ಹರಿದ ಪರಿಣಾಮ ಅವರ ಕಾಲಿಗೆ ಅಲ್ಪ ಪ್ರಮಾಣದ ಗಾಯವಾಗಿದೆ ಎನ್ನಲಾಗಿದೆ.
ಈ ಘಟನೆಯಿಂದಾಗಿ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.