ಬೆಂಗಳೂರು, ಸೆ.27 (DaijiworldNews/HR): ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲ ಪಶು ಆಸ್ಪತ್ರೆಗಳಲ್ಲಿ ಉಚಿತವಾಗಿ ನಾಯಿಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ವಾಣ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಜಾಗತಿಕವಾಗಿ ರೇಬೀಸ್ ರೋಗದ ನಿರ್ಮೂಲನೆಗಾಗಿ ಜಾಗೃತಿ ಮೂಡಿಸಲು, ಪ್ರತಿ ವರ್ಷ ಸೆಪ್ಟಂಬರ್ 28 ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತಿದ್ದು, ಉಚಿತ ಲಸಿಕೆ ಹಾಕುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯಾದ್ಯಂತ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಸೆಪ್ಟೆಂಬರ್ 28 ರಿಂದ 30ರ ವರೆಗೆ 3 ದಿನಗಳ ಕಾಲ ಉಚಿತ ಲಸಿಕೆ ನೀಡಲಾಗುತ್ತದೆ. ಮನೆಯಲ್ಲಿನ ಮುದ್ದು ಪ್ರಾಣಿಗಳ ಎಂದು ಪರಿಗಣಿಸ್ಪಡುವ ನಾಯಿಗಳ ಆರೋಗ್ಯದ ದೃಷ್ಟಿಯಿಂದ ನಿಮ್ಮ ಹತ್ತಿರದ ಪಶು ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಹಾಕಿಸಿ ಎಂದು ಸಚಿವರ ಸಾರ್ವಜನಿಕರಲ್ಲಿ ಮನವಿಮಾಡಿದ್ದಾರೆ.