ಬೆಂಗಳೂರು, ಸೆ 28 (DaijiworldNews/MS): ರಾಜ್ಯದಲ್ಲಿ ಕೊವೀಡ್ ಸಾಂಕ್ರಮಿಕ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಲ್ಲಿರುವ ನೈಟ್ ಕರ್ಪ್ಯೂವನ್ನು ಅಕ್ಟೋಬರ್ 11 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದಿನ ಆದೇಶದ ಅನ್ವಯ ಸೆ.27 ಬೆಳಿಗ್ಗೆ 5 ಗಂಟೆಗೆ ನೈಟ್ ಕರ್ಪ್ಯೂ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶ ಹೊಸ ಆದೇಶ ಹೊರಡಿಸಲಾಗಿದೆ. ರಾತ್ರಿ ಕರ್ಫ್ಯೂ'ವನ್ನು ಅಕ್ಟೋಬರ್ 11 ರ ಬೆಳಿಗ್ಗೆ 5 ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು ನಗರ ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯವಾಗಲಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.