ಮೈಸೂರು, ಸೆ.28 (DaijiworldNews/HR): ಮೈಸೂರಿನ ನಂಜನಗೂಡಿನಲ್ಲಿ ದೇವಾಲಯ ತೆರವು ಮಾಡಿದ್ದು ದೊಡ್ಡ ವಿವಾದವಾಗಿದ್ದು, ಇದೀಗ ಸರ್ಕಾರ ನಂಜನಗೂಡು ತಹಶೀಲ್ದಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದ್ದು, ತಹಶೀಲ್ದಾರ್ ಹುದ್ದೆಗೆ ಹೊಸದಾಗಿ ನೇಮಕ ಮಾಡಿಲ್ಲ.
ಮೈಸೂರಿನ ನಂಜನಗೂಡು ತಾಲೂಕಿನ ಉಚ್ಚಗಣಿ ಮಹದೇವಮ್ಮ ದೇವಾಲಯ ತೆರವು ಪ್ರಕರಣ ಸುದ್ದಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ. ಎಸ್. ತಹಶೀಲ್ದಾರ್ ಮೋಹನ ಕುಮಾರಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು ಐಎಂಎ ವಂಚನೆ ಪ್ರಕರಣ ಮತ್ತು ಸಕ್ಷಮ ಪ್ರಾಧಿಕಾರ ಬೆಂಗಳೂರು ಇಲ್ಲಿನ ತಹಶೀಲ್ದಾರ್ ಗ್ರೇಡ್ - 1 ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ನೇಮಕ ಮಾಡಲಾಗಿದೆ.
ದೇವಾಲಯ ತೆರವುಗೊಳಿಸಿದಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಾಲಯ ತೆರವು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಸೂಚನೆ ಕೊಟ್ಟಿದ್ದರು.