ನವದೆಹಲಿ, ಸೆ 28 (DaijiworldNews/MS): ಕ್ಯಾ.ಅಮರಿಂದರ್ ಪಂಜಾಬ್ ನ ಕಾಂಗ್ರೆಸ್ ಪಕ್ಷದಲ್ಲಿ ನಡೆದ ಧಿಡೀರ್ ಬೆಳವಣಿಗೆಯಲ್ಲಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಸೆ.28 ರ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿದ್ದು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಕಳುಹಿಸಿದ್ದು, ಅವರು ಕಾಂಗ್ರೆಸ್ ಸೇವೆ ಮುಂದುವರಿಸುವುದಾಗಿ ಹೇಳಿದ್ದಾರೆ. ಮಾತ್ರವಲ್ಲದೆ ಪಂಜಾಬ್ನ ಭವಿಷ್ಯ ಮತ್ತು ಪಂಜಾಬ್ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಸಿದ್ದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಹುದ್ದೆಯನ್ನು ತೊರೆಯುವ ನಿರ್ಧಾರ ತೆಗೆದುಕೊಳ್ಳುವ ಮೊದಲು ಅವರು ಗಾಂಧಿಯನ್ನು ಭೇಟಿ ಮಾಡಿಲ್ಲ ಎಂದು ತಿಳಿದುಬಂದಿದೆ.
ಕಳೆದ ಎರಡು ತಿಂಗಳ ಹಿಂದಷ್ಟೇ ಅಧ್ಯಕ್ಷ ಸ್ಥಾನಕ್ಕೆ ಏರಿದ್ದ ನವಜ್ಯೋತ್ ಸಿಂಗ್ ಸಿಧು ಅವರು ದಿಢೀರನೆ ರಾಜೀನಾಮೆ ನೀಡಿರುವ ಹಿಂದೆ ಹೊಸ ಮುಖ್ಯಮಂತ್ರಿ ಜತೆಗೂ ಸಿಧು ಮುನಿಸಿಕೊಂಡಿರುವುದಾಗಿ ವರದಿ ತಿಳಿಸಿದೆ