ನವದೆಹಲಿ, ಸೆ.28 (DaijiworldNews/HR): ಕೊರೊನಾ ನಿಯಂತ್ರಣಕ್ಕಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಆಗಮನವನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಿ ಡಿಜಿಸಿಎ( ಡೈರೆಕ್ಟ್ ಜನರಲ್ ಆಫ್ ಸಿವಿಲ್ ಎವಿಏಷನ್ ) ಆದೇಶಿಸಿದೆ.
ಸಾಂದರ್ಭಿಕ ಚಿತ್ರ
ಈ ಕುರಿತಂತೆ ಆದೇಶ ಹೊರಡಿಸಿರುವಂತ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು, ನಿಗದಿತ ಅಂತರರಾಷ್ಟ್ರೀಯ ವಾಣಿಜ್ಯ ವಿಮಾನಗಳ ಸೇವೆಗಳ ಅಮಾನತು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.