ಬೆಂಗಳೂರು, ಸೆ.29 (DaijiworldNews/PY): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ತಡರಾತ್ರಿ ಭೇಟಿ ಮಾಡಿದ್ದು, 1 ಗಂಟೆ ಕಾಲ ಚರ್ಚೆ ನಡೆಸಿದ್ದಾರೆ.
ತಮ್ಮನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನನಗೆ ಸಚಿವ ಸ್ಥಾನ ನೀಡದೇ ಇದ್ದಲ್ಲಿ ತಮ್ಮ ಸಹೋದರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಯ ವಿಚಾರವಾಗಿ ಮುಂದಿನ ವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಸೂಕ್ತ ಸಮಯದಲ್ಲಿ ಸರಿಯಾದ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರಮೇಶ್ ಜಾರಕಿಹೊಳಿಗೆ ಭರವಸೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ಮತ್ತೆ ಸಂಪುಟಕ್ಕೆ ಸೇರಿಕೊಳ್ಳಲು ಲಾಬಿ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೈಕೋರ್ಟ್ನಲ್ಲಿದ್ದು, ಕ್ಲೀನ್ ಚಿಟ್ ಪಡೆದರೆ ಮಾತ್ರವೇ ಸಂಪುಟ ಸೇರಲು ಸಾಧ್ಯ.