ಬೆಂಗಳೂರು, ಸೆ.29 (DaijiworldNews/PY): "ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಚೆಯ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಮೊದಲು ತಮ್ಮ ಚಡ್ಡಿಯ ಲಾಡಿ ಭದ್ರಪಡಿಸಿಕೊಳ್ಳಲಿ" ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, "ಪಂಚೆ ಈ ನೆಲದ ಸಂಸ್ಕೃತಿಯ ಪ್ರತೀಕ, ಶ್ರಮಜೀವಿಗಳ ಸಂಗಾತಿ, ಪಂಚೆ ಕಳಚುವುದು ಎತ್ತಿ ಕಟ್ಟುವುದೂ ಸಹಜ, ಅದೇ ಕರುನಾಡ ಮಣ್ಣಿನ ಮಕ್ಕಳ ಗತ್ತು. ಕಂಡ ಕಂಡಲ್ಲಿ ತಮ್ಮ ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಚೆಯ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಮೊದಲು ತಮ್ಮ ಚಡ್ಡಿಯ ಲಾಡಿ ಭದ್ರಪಡಿಸಿಕೊಳ್ಳಲಿ" ಎಂದಿದೆ.
"ಸಿದ್ದರಾಮಯ್ಯ ಅವರ ಪಂಚೆ ಆಕಸ್ಮಿಕವಾಗಿ ಕಳಚಿಬೀಳುವುದು ಸಹಜ, ಆದರೆ ಬಿಜೆಪಿ ನಾಯಕರು ತಮ್ಮ ಪ್ಯಾಂಟ್ನ್ನ ತಾವೇ ಕಳಚುವುದು ಅಸಹ್ಯ. ಕಳಚಿದ ನಂತರ ವಿಡಿಯೋ ಮಾಡಿಕೊಳ್ಳುವುದು, ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರುವುದು ಪರಮ ಅಸಹ್ಯ ಮುಂದೆ ನಮ್ಮ ಸರ್ಕಾರದಲ್ಲಿ ಬಿಜೆಪಿ ನಾಯಕರಿಗೆ ಕಳಚಲಾಗದ 'ಪ್ಯಾಂಟ್ ಭಾಗ್ಯ' ನೀಡುವೆವು ಚಿಂತಿಸಬೇಡಿ!" ಟಾಂಗ್ ನೀಡಿದೆ.
"ಸಿಎಂ ಬಸವರಾಜ ಬೊಮ್ಮಾಯಿ ಅವರು ಅನೈತಿಕ ಪೊಲೀಸ್ಗಿರಿಯನ್ನು ಸಹಿಸುವುದಿಲ್ಲ ಎಂದಿದ್ದರು, ಆದರೆ ಸುರತ್ಕಲ್ನಲ್ಲಿ ಬಿಜೆಪಿಯ ಭಯೋತ್ಪಾದಕ ಪಡೆ ನಡೆಸಿದ ಅನೈತಿಕ ಪೊಲೀಸ್ಗಿರಿಯ ಬಗ್ಗೆ ತುಟಿ ಬಿಚ್ಚದೆ ಆರೋಪಿಗಳಿಗೆ ಸ್ಟೇಶನ್ ಬೇಲ್ ನೀಡಿ ತಕ್ಷಣವೇ ಬಿಟ್ಟು ಕಳಿಸಿದ್ದೇಕೆ? ರಾಜ್ಯವನ್ನು ತಾಲಿಬಾನಿಕರಣ ಮಾಡಲು ಬಿಜೆಪಿ ಮುಂದಾಗಿದೆ" ಎಂದು ಆರೋಪಿಸಿದೆ.