ರಾಮನಗರ, ಸೆ 29 (DaijiworldNews/MS): ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ 30-35 ಕ್ಷೇತ್ರದಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲಿಡುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬಿಡದಿಯಲ್ಲಿ ಸೆಪ್ಟೆಂಬರ್ 27ರಿಂದ 4 ದಿನ ಕಾಲ ಜೆಡಿಎಸ್ನಿಂದ ಕಾರ್ಯಾಗಾರ ನಡೆಯಲಿದ್ದು ಕಾರ್ಯಾಗಾರದ ಮೂರನೇ ದಿನವಾದ ಬುಧವಾರ ಜೆಡಿಎಸ್ ಮಹಿಳಾ ಘಟಕದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾಜಿ ಸಿಎಂ ಹೆಚ್ ಡಿಕೆ ಮಾತನಾಡಿದರು. 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ 7-8 ಜನ ಅಭ್ಯರ್ಥಿಗಳನ್ನ ಈಗಾಗಲೇ ಆಯ್ಕೆ ಮಾಡಲಾಗಿದ್ದು ಒಟ್ಟಾರೆ 30-35 ಸೀಟನ್ನು ಮಹಿಳೆಯರಿಗಾಗಿ ಮೀಸಲಿಡಲಾಗುತ್ತದೆ ಎಂದು ಹೇಳಿದರು.
ಬಿಜೆಪಿ ಮತ್ತು ಕಾಂಗ್ರೆಸ್ಗೆ ಹೋಲಿಸಿದಲ್ಲಿ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಹೀಗಾಗಿ ಬೂತ್ ಮಟ್ಟದಿಂದ ಮಹಿಳಾ ಘಟಕಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತದೆ.ಪ್ರತಿ ಕ್ಷೇತ್ರದಲ್ಲಿ 100 ಕುಟುಂಬಗಳ ಸಮಸ್ಯೆಗೆ ಪರಿಹಾರ ನೀಡುವ ಜವಾಬ್ದಾರಿಯನ್ನ ಪ್ರತಿ ಮಹಿಳಾ ನಾಯಕಿಯರಿಗೆ ನೀಡಲಾಗುತ್ತೆ ಎಂದರು 2023ರಲ್ಲಿ ಪಕ್ಷ ಅಧಿಕಾರಕ್ಕೆ ಬಂದ್ರೆ ಶೇ.33 ಮೀಸಲಾತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.