ಬೆಂಗಳೂರು, ಸೆ.29 (DaijiworldNews/PY): ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ನ್ಯಾ.ಪ್ರದೀಪ್ ಸಿಂಗ್ ಎರೋರ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.
ಕ್ಷಮಾಧಾನ ಅರ್ಜಿಯನ್ನು ರಾಷ್ಟ್ರಪತಿಗಳು ವಿಳಂಬ ಮಾಡಿಲ್ಲ ಎಂಬುದಾಗಿ ಅಭಿಪ್ರಾಯಪಟ್ಟು, ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ. ಆದರೆ, ಗಲ್ಲು ಶಿಕ್ಷೆ ಖಾಯಂಗೊಂಡ ಹಿನ್ನೆಲೆಯಲ್ಲಿ ಆರು ವಾರಗಳವರೆಗೆ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸುವುದಕ್ಕೆ ವಿನಾಯಿತಿ ಕೂಡಾ ನೀಡಿ ಆದೇಶಿಸಿದ್ದಾರೆ.
ಈ ಹಿಂದೆ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಕ್ಷಮಾಧಾನಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು ಆದರೆ, ರಾಷ್ಟ್ರಪತಿಗಳು ಕ್ಷಮಾಧಾನ ಅರ್ಜಿಯನ್ನು ತಿರಸ್ಕರಿಸಿದ್ದರು. ನಂತರ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡಿಸುವಂತೆ ಕೋರಿದ್ದರು. ಆದರೆ, ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಚಿತ್ರದುರ್ಗ ಮೂಲದ ಉಮೇಶ್ ರೆಡ್ಡಿ ಬೆಂಗಳೂರು ಸೇರಿದಂತೆ ಹಲವೆಡೆ ಸುಮಾರು 20ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈದಿದ್ದ.