ನವದೆಹಲಿ, ಸೆ. 29 (DaijiworldNews/SM): ಇತ್ತೀಚಿಗಷ್ಟೇ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಆ ಮೂಲಕ ಉಂಟಾಗಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.
ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ಇನ್ನು ತಮ್ಮ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮರೀಂದರ್ ಸಿಂಗ್, ತಾನು ಹಾಗೂ ಅಮಿತ್ ಶಾ ಭೇಟಿ ಕೇವಲ "ಸೌಜನ್ಯದ ಭೇಟಿ" ಎಂದು ಹೇಳಿಕೊಂಡಿದ್ದಾರೆ. ಆದರೆ, ರಾಜಕೀಯ ವಲಯದಲ್ಲಿ ಮಾತ್ರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪಂಜಾಬ್ ನಾಯಕ ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಕೆಲವು ವರದಿಗಳ ಪ್ರಕಾರ, ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.