ಬೆಂಗಳೂರು, ಸೆ 30 (DaijiworldNews/MS): ಕನ್ನಡದ ಕಿರುತೆರೆ ನಟಿ ಸವಿ ಮಾದಪ್ಪ (25) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಕಿರುತೆರೆ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಕುಂಬಳಗೋಡಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ ಮೆಂಟ್ ನಲ್ಲಿ ನಟಿ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದರು.
ಕೊಡುಗು ಜಿಲ್ಲೆ ಕುಶಾಲನಗರ ಮೂಲದ ನಟಿ ಸವಿ ಮಾದಪ್ಪ ಚೌಕಟ್ಟು, ಫನ್ ಸಿನಿಮಾದಲ್ಲಿ ನಟಿಸಿದ್ದರು.ಜೊತೆಗೆ ಕನ್ನಡದ ಹಲವು ಧಾರವಾಹಿಗಳಲ್ಲಿ ಸಹ ನಟಿಸಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಆದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದುಕೊಂಡಿರುವುದಾಗಿ ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.