ಜೈಪುರ, ಸೆ.30 (DaijiworldNews/PY): "ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಅಥವಾ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಸ್ಥೆ ಇರಬೇಕು ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ನಾಲ್ಕು ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ, ರಾಜಸ್ತಾನ ಪೆಟ್ರೋಕೆಮಿಕಲ್ಸ್ ತಾಂತ್ರಿಕ ಸಂಸ್ಥೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, "ರೋಗ ತಡೆಗಟ್ಟುವ ಆರೋಗ್ಯ ಸೇವಾ ವ್ಯವಸ್ಥೆ ಸ್ಥಾಪನೆಯತ್ತ ಸರ್ಕಾರ ಗಮನ ಹರಿಸಿದೆ. ಆಯುರ್ವೇದ, ಯೋಗಕ್ಕೂ ಉತ್ತೇಜನ ನೀಡಲಾಗುತ್ತಿದೆ. ಸದ್ಯ ದೇಶದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆ ನಡುವೆ ಅಂತರ ಕುಗ್ಗಿದೆ" ಎಂದಿದ್ದಾರೆ.
"ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಅಥವಾ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಸ್ಥೆ ಇರಬೇಕು ಎಂಬುದನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ" ಎಂದು ಹೇಳಿದ್ದಾರೆ.
ಹಿಂದಿನ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಬಗ್ಗೆ ಮಾತನಾಡಿದ ಅವರು, "ಇವು ವೈದ್ಯಕೀಯ ಶಿಕ್ಷಣದ ಗುಣಮಟ್ಟ ಹಾಗೂ ಆರೋಗ್ಯ ಸೇವೆಗಳ ವಿತರಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ" ಎಂದು ತಿಳಿಸಿದ್ದಾರೆ.