ಮಧ್ಯಪ್ರದೇಶ, ಅ.01 (DaijiworldNews/PY): ಡಂಪರ್ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗೆ ಭಿಂಡ್ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ ಡಂಪರ್ಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ.
ಬಸ್ ಗ್ವಾಲಿಯರ್ನಿಂದ ಬರೇಲಿಗೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.
ಅಪಘಾತ ನಡೆದ ಕೂಡಲೇ ಕೂಗು ಕೇಳಿಬಂದಿದ್ದು, ಹತ್ತಿರದ ಪ್ರದೇಶಗಳಿಂದ ಜನರು ಘಟನಾ ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.