ಭೋಪಾಲ್, ಅ.01 (DaijiworldNews/PY): ವಾಹನ ಚಾಲಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಯ ಸ್ನಾನದ ದೃಶ್ಯಗಳನ್ನು ಸೆರೆಹಿಡಿದು 5 ಲಕ್ಷ ರೂ. ನೀಡುವಂತೆ ಡಿಮ್ಯಾಂಡ್ ಮಾಡಿದ್ದು, ಪೊಲೀಸರಿಗೆ ದೂರು ನೀಡುತ್ತಿದಂತೆ ಆರೋಪಿ ಪರಾರಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಆರೋಪಿಯನ್ನು ಭೂಪೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.
ಆರೋಪಿ ಮಹಿಳಾ ಪೊಲೀಸ್ ಅಧಿಕಾರಿ ವಾಹನ ಚಾಲಕನಾಗಿದ್ದು, ಆಕೆಯ ಸ್ನಾನದ ದೃಶ್ಯಗಳನ್ನು ಸೆರೆಹಿಡಿದು 5 ಲಕ್ಷ ರೂ. ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದೇ ಇದ್ದಲ್ಲಿ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಮಹಿಳಾ ಪೊಲೀಸ್ ಅಧಿಕಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮಾಹಿತಿ ನೀಡಿದ್ದು, ಅವರ ಸಲಹೆಯಂತೆ ಭೋಪಾಲ್ ಕ್ರೈಂ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ, ಆರೋಪಿ ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.