ಹಾಸನ, ಅ.01 (DaijiworldNews/HR): ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾನೂನು ತರುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮತಾಂತರ ಮಾಡಿ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಅಧರ್ಮ, ಹಿಂದೂ ಧರ್ಮ ಜಗತ್ತಿನಲಿಯೇ ಪಾವಿತ್ರ್ಯತೆ ಹೊಂದಿರುವಂತದ್ದು, ಮತಾಂತರದಿಂದಾಗಿ ರಾಜ್ಯಾದ್ಯಂತ ಕೋಮು ಗಲಭೆ ನಡೆಯುತ್ತಿದೆ" ಎಂದರು.
ಇನ್ನು ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಮತಾಂತರದ ಬಗ್ಗೆ ಮಾತನಾಡಿದ ಅವರು, ಮತಾಂತರಕ್ಕೆ ಶಾಸಕರ ಕುಟುಂಬ ಒಳಗಾಗಿರುವುದು ವಿಪರ್ಯಾಸ, ಮತಾಂತರ ನಿಷೇಧಿಸಲು ಕಾನೂನು ರಚಿಸುವ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾನೂನು ತರುತ್ತೇವೆ ಎಂದು ಹೇಳಿದ್ದಾರೆ.