ನವದೆಹಲಿ, ಅ.01 (DaijiworldNews/HR): ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಇಡಿ ವಿಚಾರಣೆಗಾಗಿ ದೆಹಲಿಗೆ ತೆರಳಿದ್ದಾರೆ.
ಜಮೀರ್ ಅಹ್ಮದ್ ಖಾನ್ ಅವರ ಮನೆ ಮೇಲೆ ನಡೆದ ಇಡಿ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಇಂದು ದೆಹಲಿಗೆ ತೆರಳಿದ್ದು, ದೆಹಲಿಯ ಖಾನ್ ಮಾರ್ಕೆಟ್ ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಇನ್ನು ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಬಳಿಕ ಕೆಲ ದಾಖಲೆಗಳನ್ನು ನೀಡಿದ್ದ ಜಮೀರ್ ಅಹ್ಮದ್ ಖಾನ್ ಗೆ ಮತ್ತಷ್ಟು ದಾಖಲೆಗಳನ್ನು ನೀಡುವಂತೆ ಇಡಿ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ಇಡಿ ಕಚೇರಿಯಲ್ಲಿ ಚಾರಣೆಗೆ ಹಾಜರಾಗಿದ್ದಾರೆ.