ಚಿಕ್ಕಮಗಳೂರು, ಅ.01 (DaijiworldNews/HR): 6 ರಿಂದ 12 ನೇ ತರಗತಿಯವರೆಗೆ ಸಂಪೂರ್ಣ ಶಾಲಾರಂಭಕ್ಕೆ ಈಗಾಗಲೇ ಮೌಖಿಕವಾಗಿ ಸೂಚನೆ ನೀಡಿದ್ದು, ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ. ದಸರಾ ಹಬ್ಬದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದರು.
ಇನ್ನು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದು ಶಾಲೆಗಳಿಗೆ ತೊಂದರೆಯಾಗುತ್ತದೆ ಎಂದು ಅನಿಸುವುದಿಲ್ಲ ಎಂದಿದ್ದಾರೆ..
ದಸರಾ ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈ ವಾರದಲ್ಲಿ ಸಿಎಂ ಹಾಗೂ ಕೊರೊನಾ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಒಂದರಿಂದ ಐದರವರೆಗೆ ಶಾಲೆಗಳ ಆರಂಭಕ್ಕೆ ಮನವಿ ಮಾಡಿದ್ದು, 3,4,5 ನೇ ತರಗತಿ ಆರಂಭಿಸುವುದಕ್ಕಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದರು.