ಶೋಪಿಯಾನ್ , ಅ.01 (DaijiworldNews/HR): ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ, ಓರ್ವ ಉಗ್ರನನ್ನು ಹತ್ಯೆಗೈದ ಘಟನೆ ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ನ ರಖಾಮಾ ಎಂಬ ಪ್ರದೇಶದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿಗಳು ಲಭ್ಯವಾದ ಬೆನ್ನಲ್ಲೇ ಶುಕ್ರವಾರ ಬೆಳಗಿನ ಜಾವದಿಂದಲೇ ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಇನ್ನು ಕಾರ್ಯಚರಣೆಯ ವೇಳೆ ಅಡಗಿ ಕುಳಿತಿದ್ದ ಉಗ್ರ ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಸ್ಥಳವನ್ನು ಸುತ್ತುವರೆದ ಸೇನಾಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.