ಬೆಂಗಳೂರು, ಅ.02 (DaijiworldNews/PY): ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಾಜಿ ಮುಖ್ಯಮಂತ್ರಿ ಭೇಟಿ ನೀಡಿದ್ದು, ನಾಡ ಹಬ್ಬ ದಸರಾ ಮಹೋತ್ಸವ - 2021ರ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಿದ್ದಾರೆ.
ಈ ಬಾರಿಯ ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್ ಎಂ ಕೃಷ್ಣಾ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಹಿನ್ನೆಲೆ ಇಂದು ಸಿಎಂ ಬವರಾಜ ಬೊಮ್ಮಾಯಿ ಅವರು ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಆಹ್ವಾನ ನೀಡಿದರು.
ಈ ಸಂದರ್ಭ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, "ದಸರಾ ಉದ್ಘಾಟನೆಗೆ ಎಸ್ ಎಂ ಕೃಷ್ಣ ಅವರನ್ನು ಆಹ್ವಾನಿಸಿದ್ದೇವೆ. ಅವರು ನಮ್ಮ ಆಹ್ವಾನಕ್ಕೆ ಒಪ್ಪಿಕೊಂಡಿದ್ದಾರೆ. ಎಸ್ ಎಂ ಕೃಷ್ಣ ಅವರು ಓರ್ವ ಮುತ್ಸದ್ಧಿ ರಾಜಕಾರಣಿ" ಎಂದಿದ್ದಾರೆ.
ಈ ವೇಳೆ ಪ್ರೇಮಾ ಕೃಷ್ಣ, ಕಂದಾಯ ಸಚಿವ ಆರ್ ಅಶೋಕ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಮೈಸೂರು ಮೇಯರ್ ಸುನಂದಾ ಪಾಲನೇತ್ರ ಉಪಸ್ಥಿತರಿದ್ದರು.