ವಿಜಯನಗರ, ಅ.02 (DaijiworldNews/HR): ಕರ್ನಾಟಕದ 31 ನೇ ಜಿಲ್ಲೆಯಾಗಿ 'ವಿಜಯನಗರ' ವನ್ನು ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ.
ಜಿಲ್ಲೆಯ ಹೊಸಪೇಟೆಯಲ್ಲಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಹೊಸಪೇಟೆಯಲ್ಲಿ ಕ್ರೀಡಾಂಗಣದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದ್ದು, ಈ ಮೊದಲು ಬಳ್ಳಾರಿಗೆ ಸೇರಿದ್ದ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ವಿಜಯನಗರ ನೂತನ ಜಿಲ್ಲೆಯಲ್ಲಿ ಇರಲಿವೆ.
ಇನ್ನು ಇದುವರೆಗೆ ಬಳ್ಳಾರಿ ಜಿಲ್ಲೆಯೊಂದಿಗೆ ಸೇರಿಕೊಂಡಿದ್ದಂತ ವಿಜಯನಗರವು ಇಂದು ನೂತನ ಜಿಲ್ಲೆಯಾಗಿ ಉದಯವಾಗಿದೆ.