ಬೆಂಗಳೂರು, ಅ.02 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 636 ಹೊಸ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 29,77,225ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಶನಿವಾರ 636 ಹೊಸ ಪ್ರಕರಣ ಪತ್ತೆಯಾಗಿದ್ದು, 745 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 29,27,029 ಆಗಿದೆ.
ಇನ್ನು ರಾಜ್ಯದಲ್ಲಿ 12,356 ಸಕ್ರಿಯ ಪ್ರಕರಣಗಳಿದ್ದು, ಇಂದು 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟಾರೇ ಮೃತರ ಸಂಖ್ಯೆ 37,811ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ. 0.37 ರಷ್ಟಿದ್ದು, ಮರಣ ಪ್ರಮಾಣ ಶೇ. 0. 62 ರಷ್ಟಿದೆ.