ಕೊಲ್ಕತ್ತಾ, ಅ.03 (DaijiworldNews/PY): ಪಶ್ಚಿಮ ಬಂಗಾಳದ ಭಬಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಸದ್ಯ ದೇಶದ ಚಿತ್ತ ಭಬಾನಿಪುರ ಕ್ಷೇತ್ರದ ಮೇಲಿದೆ.
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಕಳೆದ ಗುರುವಾರ ಮತದಾನ ನಡೆದಿದ್ದು, ಶೇ.57ರಷ್ಟು ಮತದಾನ ನಡೆದಿದೆ.
ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ವಿರುದ್ದ ಬಿಜೆಪಿಯಿಂದ ಪ್ರಿಯಾಂಕ ಟಿಬ್ರೆವಾಲಾ ಕಣದಲ್ಲಿದ್ದಾರೆ.
ಸೆ.30ರಂದು ಉಪ ಚುನಾವಣೆ ಮತದಾನ ನಡೆದಿತ್ತು. ಸಿಎಂ ಆಗಿರುವ ಮಮತಾ ಬ್ಯಾನರ್ಜಿ ಶಾಸಕರಾಗಿ ಆಯ್ಕೆಯಾಗಬೇಕು ಎಂಬ ಕಾರಣಕ್ಕೆ ಹಿಂದಿನ ಚುನಾವಣೆಯಲ್ಲಿ ಭವಾನಿಪುರದಲ್ಲಿ ಗೆದ್ದಿದ್ದ ಸೋವನ್ದೇವ್ ಚಟ್ಟೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.