ಮೈಸೂರು, ಅ.03 (DaijiworldNews/PY): "ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ" ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಮುಂದಿನ ವರ್ಷದಿಂದಲೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಬಗ್ಗೆ ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ್ ಅವರ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದೆ" ಎಂದಿದ್ದಾರೆ.
"ರಾಜ್ಯದಲ್ಲಿ 1ರಿಂದ ದ್ವಿತೀಯ ಪಿಯುಸಿವರೆಗೆ ನಾಲ್ಕು ಹಂತಗಳ ಶಿಕ್ಷಣ ಪಠ್ಯಕ್ರಮ ರೂಪಿಸಲಾಗವುದು. ಇದಕ್ಕಾಗಿ ಪ್ರತ್ಯೇಕ ರಚಿಸಲಾಗಿದೆ" ಎಂದು ತಿಳಿಸಿದ್ದಾರೆ.