ಬೆಂಗಳೂರು, ಅ.03 (DaijiworldNews/PY): "ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ" ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಭಾನುವಾರ ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಧ್ಯಾಹ್ನ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಭೆ ನಡೆಯಲಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿ ಕಳುಹಿಸಲಾಗುವುದು. ಕೇಂದ್ರ ಸಮಿತಿ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಕಟಿಸಲಿದೆ" ಎಂದಿದ್ದಾರೆ.
"ಬಿಜೆಪಿ ಎರಡೂ ಕ್ಷೇತ್ರಗಳ್ಲಲಿ ಜಯ ಸಾಧಿಸಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ" ಎಂದು ಹೇಳಿದ್ದಾರೆ.