ಕೋಲ್ಕತ್ತಾ, ಅ.03 (DaijiworldNews/HR): ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಾರೆ.
ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ನಂದಿಗ್ರಾಮದಲ್ಲಿ ಚುನಾವಣೆಯಲ್ಲಿ ಸೋಲು ಕಂಡ ಅವರು ನವೆಂಬರ್ 5ರೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದ್ದು, ಭವಾನಿಪುರ ಕ್ಷೇತ್ರದಲ್ಲಿ ಮಮತಾ ಉಪ ಚುನಾವಣೆ ಕಣಕ್ಕಿಳಿದಿದ್ದಾರೆ.
ಇನ್ನು ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಹಾಗೂ ಸಿಪಿಐ(ಎಂ) ನಿಂದ ಶ್ರೀಜಿಬ್ ಬಿಸ್ವಾಸ್ ಅಭ್ಯರ್ಥಿಗಳಾಗಿದ್ದು, ಸೆಪ್ಟೆಂಬರ್ 30ರಂದು ಉಪ ಚುನಾವಣೆ ಮತದಾನ ನಡೆದಿತ್ತು.
ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೇವಾಲ್ಗಿಂತ ಮಮತಾ ಬ್ಯಾನರ್ಜಿ ಅವರಿಗೆ 58,832 ಮತಗಳು ಹೆಚ್ಚಾಗಿ ಬಂದಿರುವುದಾಗಿ ಪ್ರಕಟವಾಗಿದೆ.