ಬೆಂಗಳೂರು, ಅ.03 (DaijiworldNews/HR): ರಾಜ್ಯದಲ್ಲಿ ಭಾನುವಾರ ಹೊಸದಾಗಿ 664 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಇಂದು 664 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿ, ಒಟ್ಟು ಸೋಂಕಿತರ ಸಂಖ್ಯೆ 29,77,889 ಕ್ಕೆ ಏರಿಕೆಯಾಗಿದೆ. ಇದುವರೆಗೆ 37,819 ಸೋಂಕಿತರು ಸಾವನ್ನಪ್ಪಿದ್ದು, 29,27,740 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ.
ಇನ್ನು ರಾಜ್ಯದಲ್ಲಿ ಇಂದು 711 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,27,740 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 12,301 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 196 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 254 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7600 ಸಕ್ರಿಯ ಪ್ರಕರಣಗಳಿವೆ.