ಬೆಂಗಳೂರು, ಅ. 03 (DaijiworldNews/SM): ಕೆಲವು ಶಾಸಕರು ಬಹಿರಂಗವಾಗಿ ಪಕ್ಷ ತೊರೆಯುವ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಜೆಡಿಎಸ್ ಎಚ್. ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.
ಬಿಡದಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಬೆಳೆದು ನಂತರ ಹೊರ ಹೋಗಿ ನಿಂದನೆ ನಡೆಸುವುದು ಸರಿಯಾದ ಕ್ರಮವಲ್ಲ. ಈ ವಿಚಾರಕ್ಕೆ ಸಂಬಂಧಿಸಿ ಸುಮ್ಮನಿರಲಾರದು. ಏನೇ ಸಮಸ್ಯೆ ಇದ್ದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.
ಪಕ್ಷದ ವಿಚಾರವಾಗಿ ಏನೇ ಸಮಸ್ಯೆ, ಗೊಂದಲ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆಗೆ ಸಿದ್ಧ, ಆದರೆ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು ಎಂದು ಅವರು ಹೇಳಿದರು.