ಮೈಸೂರು, ಅ 04 (DaijiworldNews/MS): ಕಾಂಗ್ರೆಸ್ ನಾಯಕರಿಬ್ಬರಿಗೆ ಅಧಿಕಾರವೊಂದೇ ಗುರಿಯಾಗಿದೆ . ಇದೇ ಕಾರಣಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಮುಂಚೆಯೇ ಕಾಂಗ್ರೆಸ್ ಎರಡು ಹೋಳಾಗುತ್ತೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಡಿ.ಕೆ. ಶಿವಕುಮಾರ್ಗೂ ಅಧಿಕಾರ ಬೇಕು. ಸಿದ್ದರಾಮಯ್ಯರಿಗೂ ಅಧಿಕಾರ ಬೇಕು. ಇದರಿಂದ ಕಾಂಗ್ರೆಸ್ ಎರಡು ಹೋಳಾಗುತ್ತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರಿಗೂ ಅಧಿಕಾರ ಬೇಕಾಗಿದೆ. ಸಿದ್ದಾರಾಮಯ್ಯ ಅವರಿಗೆ ಹೇಗಾದರೂ ಸರಿ ಸಿಎಂ ಆಗಬೇಕು ಅನ್ನೋ ಹುಚ್ಚು. ಡಿಕೆ ಶಿವಕುಮಾರ್ಗೆ ಬಿಜೆಪಿಯವರನ್ನ ಹೇಗಾದರೂ ಎಳೆದುಕೊಳ್ಳಬೇಕು ಅನ್ನೋ ಹುಚ್ಚು. ಈ ಇಬ್ಬರು ಹುಚ್ಚರನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಇದಕ್ಕೆ ಬೇರೆ ಏನು ಉತ್ತರ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಅವರು ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದನ್ನು ಉಲ್ಲೇಖಿಸಿ ಮಾತನಾಡಿದ ಅವರು, " ಕೆಲವರಿಗೆ ಎಂಎಲ್ಎ ಸೀಟ್ ಸಿಗಲಿಲ್ಲ ಅನ್ನೋ ಹುಚ್ಚು, ಇನ್ನೂ ಕೆಲವರಿಗೆ ಟಿಕೆಟ್ ಸಿಗಲಿಲ್ಲ ಅನ್ನೋ ಹುಚ್ಚು. ಸಿದ್ದರಾಮಯ್ಯರಿಗೆ ಸಿಎಂ ಆಗುವ ಹುಚ್ಚು ಕನಸು ಎಂದು ವ್ಯಂಗ್ಯವಾಡಿದ ಅವರು, ಕಳೆದ ಚುನಾವಣೆಯಲ್ಲಿ ಜನ ಯಾಕೆ ನಿಮ್ಮನ್ನು ಕೈ ಬಿಟ್ಟರು? ಚಾಮುಂಡೇಶ್ವರಿಯಲ್ಲಿ ಯಾಕೆ ಸೋತಿರಿ? ಎಂದು ಕುಹಕವಾಡಿದ್ದಾರೆ