ನವದೆಹಲಿ, ಅ.04 (DaijiworldNews/PY): ಏರ್ ಇಂಡಿಯಾ ವಿಮಾನವೊಂದು ಫ್ಲೈ ಓವರ್ ಕೆಳಗೆ ಸಿಲುಕಿ ಹಾಕಿಕೊಂಡಿರುವ ಘಟನೆ ದೆಹಲಿ-ಗುರಗಾಂವ್ ಹೆದ್ದಾರಿಯಲ್ಲಿರುವ ಐಜಿಐ ವಿಮಾನ ನಿಲ್ದಾಣದ ಬಳಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
40 ಸೆಕೆಂಡುಗಳ ವಿಡಿಯೋ ಕ್ಲಿಪ್ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬಂದಿಯಲ್ಲಿ ಸಿಲುಕಿಕೊಂಡಿರುವುದು ಕಂಡು ಬರುತ್ತದೆ.
ಈ ದೃಶ್ಯ ವೈರಲ್ ಆಗುತ್ತಿದ್ದಂತೆ ಇದರಿಂದ ಯಾವುದೇ ರೀತಿಯಾದ ಅಪಘಾತ ಸಂಭವಿಸಿಲ್ಲ. ಏರಿ ಇಂಡಿಯಾದಿಂದ ವಿಮಾನವನ್ನು ಖರೀದಿಸಿ ಅದರ ಹೊಸ ಮಾಲೀಕರಿಂದ ವಿಮಾನವನ್ನು ಸಾಗಿಸಲಾಗುತ್ತಿದೆ ಎಂದು ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದೆ.
ಈ ವಿಮಾನವನ್ನು ಮಾರಾಟ ಮಾಡಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಏರ್ ಇಂಡಿಯಾ ವಕ್ತಾರರು ಹೇಳಿರುವುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.