ಬೆಂಗಳೂರು, ಅ.04 (DaijiworldNews/PY): ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ" ಎಂದಿದ್ದಾರೆ.
"ಸಿದ್ದರಾಮಯ್ಯ ಅವರಿಗೆ ಇನ್ನೊಬ್ಬರ ಮನೆಯೊಳಗೆ ಇಣುಕಿ ನೋಡುವ ಚಟ ಏಕೆ ಬಂತೋ ತಿಳಿದಿಲ್ಲ. ಇದು ಒಳ್ಳೆಯ ಲಕ್ಷಣ ಅಲ್ಲ" ಎಂದು ಹೇಳಿದ್ದಾರೆ.
ಒಳ ಒಪ್ಪಂದದ ಕಾರಣದಿಂದ ಜೆಡಿಎಸ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, "ಯಾವ ಪಕ್ಷದವರು ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದನ್ನು ನಾನು ಹೇಗೆ ಹೇಳಲು ಸಾಧ್ಯ?. ಆರ್ಎಸ್ಎಸ್ನವರಿಗೆ ಕಾಂಗ್ರೆಸ್ನವರು ಯಾವಾಗಾದರೂ ಟಿಕೆಟ್ ನೀಡಿದ್ದಾರಾ?. ಅವರಿಗೆ ರಾಷ್ಟ್ರೀಯ ಹಿತ ಇಲ್ಲ ಎಂದು ನಾನು ಹೇಳಲು ಸಾಧ್ಯ?" ಎಂದು ಕೇಳಿದ್ದಾರೆ.