ಬೆಂಗಳೂರು, ಅ.04 (DaijiworldNews/HR): ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಸಚಿವರುಗಳ ಭೇಟಿ ನೀಡಿದ ವೇಳೆ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಂಧಿಸಲಾಗಿದ್ದು, ಈ ಬಗ್ಗೆ ಡಿ.ಕೆ ಶಿವಕುಮಾರ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಕೆಶಿ, "ಉತ್ತರ ಪ್ರದೇಶದಲ್ಲಿ ಪ್ರತಿಭಟನೆನಿರತ ರೈತರ ಹತ್ಯೆ ಹಾಗೂ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧನ ಮಾಡಿರುವುದು ಖಂಡನೀಯ" ಎಂದಿದ್ದಾರೆ.
ಇನ್ನು "ಈ ದೇಶದಲ್ಲಿ ಅನ್ನದಾತರಿಗೆ ರಕ್ಷಣೆ ಇಲ್ಲ. ರಕ್ಷಕರೇ ಭಕ್ಷಕರಾಗಿದ್ದಾರೆ, ರಾಕ್ಷಸರಾಗಿದ್ದಾರೆ. ಇದು ರಾಮರಾಜ್ಯವೋ?! ರಾವಣ ರಾಜ್ಯವೋ?," ಎಂದು ಪ್ರಶ್ನಿಸಿದ್ದಾರೆ.
ಈ ಬಂಧನವನ್ನು ಹಿಟ್ಲರ್ ಸಂಸ್ಕೃತಿಗೆ ಹೋಲಿಕೆ ಮಾಡಿರುವ ಡಿಕೆಶಿ, ಪ್ರಿಯಾಂಕಾ ಗಾಂಧಿ ಅವರ ಬಂಧನ ಮಾಡಿರುವುದು ಹಿಟ್ಲರ್ ಸಂಸ್ಕೃತಿಯ ಪ್ರತೀಕ, ಖಂಡನೀಯ," ಎಂದು ಹೇಳಿದ್ದಾರೆ.