ಬೆಂಗಳೂರು, ಅ 04 (DaijiworldNews/MS): ತಾಲಿಬಾನ್ ಗುಂಡು ಹಾರಿಸಿ ಕೊಂದರೆ , ಬಿಜೆಪಿಯೂ ಕಾರು ಹತ್ತಿಸಿ ಜನರನ್ನು ಕೊಲ್ಲುತ್ತಿದ್ದಾರೆ ಇವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ಪಕ್ಷದ ವಿರುದ್ದ ಕಿಡಿಕಾರಿದೆ.
ಮೂಡಿಗೆರೆ ಬಿಜೆಪಿ ಶಾಸಕ ಎಂ. ಪಿ. ಕುಮಾರಸ್ವಾಮಿ ಕಾರು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ , " ಬಿಜೆಪಿಗೂ ತಾಲಿಬಾನ್ಗೂ ಯಾವುದೇ ವ್ಯತ್ಯಾಸವಿಲ್ಲ.ಅವರು ಗುಂಡು ಹಾರಿಸಿ ಕೊಲ್ಲುತ್ತಿದ್ದಾರೆ. ಇವರು ಕಾರು ಹತ್ತಿಸಿ ಕೊಲ್ಲುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದೆ
ಬೇಲೂರು ಪಟ್ಟಣದ ಹನುಮಂತನಗರದ ಬಳಿ ಭಾನುವಾರ ಅಪಘಾತ ನಡೆದಿದ್ದು, ಮೂಡಿಗೆರೆ ಶಾಸಕರ ಕಾರು ಚಲಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಹೂವಮ್ಮ (58) ಮೃತಪಟ್ಟಿದ್ದರು. ಇವರ ಪುತ್ರ ತೀವ್ರ ಗಾಯಗೊಂಡಿದ್ದು ಆಸ್ಪ್ರತೆಗೆ ದಾಖಲು ಮಾಡಲಾಗಿದೆ.ಚಾಲಕ ಪ್ರವೀಣ್ ನಿರ್ಲಕ್ಷ್ಯ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ. ಘಟನೆ ವೇಳೆ ಚಾಲಕ ಮದ್ಯಪಾನ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದ ವೇಳೆ ಕಾರಿನಲ್ಲಿ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಪ್ರಯಾಣಿಸುತ್ತಿರಲಿಲ್ಲ ಎನ್ನಲಾಗಿದೆ.
ಈ ಹಿಂದೆ ಬಿಜೆಪಿ ನಾಯಕ ಸಿ.ಟಿ ರವಿ ಕಾರು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.